ಉಬರಡ್ಕ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ನಿಂದ ಸಹಾಯಧನ

0

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ರೂ.10 ಲಕ್ಷ ಸಹಾಯಧನವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಒದಗಿಸಲಾಯಿತು. ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ಬಾಲ್ಯೋಟ್ಟು ಸಹಾಯಧನವನ್ನು ಉಬರಡ್ಕ ಮಿತ್ತೂರು ಸಹಕಾರಿ ಸಂಘದ ಉಪಾಧ್ಯಕ್ಷರಾದ ರಾಜೇಶ್ ಭಟ್ ನೆಕ್ಕಿಲರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಹರಿಪ್ರಸಾದ್ ಪಾನತ್ತಿಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಪಿ. ಉಪಸ್ಥಿತರಿದ್ದರು.