ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಣ ಶನಿವಾರ

0

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆಯ ಸೋಣ ಶನಿವಾರದ ಪ್ರಯುಕ್ತ ದೇವರಿಗೆ ವಿಶೇಷ ಮಹಾಪೂಜೆಯು ಸೆ.14ರಂದು ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.