ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ಆಶ್ರಯದಲ್ಲಿ ಕೆ.ವಿ.ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಅಡ್ಕಾರು ವನವಾಸಿ ವಸತಿ ನಿಲಯದಲ್ಲಿ ಉಚಿತ ದಂತ ತಪಾಸಣಾ ಶಿಬಿರ ಸೆ. 14ರಂದು ನಡೆಯಿತು.
ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ಅಧ್ಯಕ್ಷೆ ಶ್ರೀಮತಿ ಉಷಾ ಬಿ. ಭಟ್ ರವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಲಯನ್ಸ್ ಪ್ರಾಂತೀಯ ರಾಯಭಾರಿ ಶ್ರೀಮತಿ ರೇಣುಕಾ ಸದಾನಂದ ಜಾಕೆ ಉದ್ಘಾಟಿಸಿ ಶುಭ ಹಾರೈಸಿದರು. ವನವಾಸಿ ವಸತಿ ನಿಲಯದ ಆಡಳಿತ ಮಂಡಳಿ ಕೋಶಾಧಿಕಾರಿ ಹಾಗೂ ಕೆ.ವಿ.ಜಿ. ಡೆಂಟಲ್ ಕಾಲೇಜಿನ ಪ್ರೊಫೆಸರ್ ಡಾ. ಮನೋಜ್ ಅಡ್ಡಂತಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಸತಿ ನಿಲಯದ ವ್ಯವಸ್ಥಾಪಕ ಕೈಲಾಸ್ ಭೋಪಲಾಪುರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೆಳ್ಳಾರೆ ಲಯನ್ಸ್ ಕ್ಲಬ್‌ನ ಕೋಶಾಧಿಕಾರಿ ಈಶ್ವರ ವಾರಣಾಶಿ ಸ್ವಾಗತಿಸಿ, ವಸತಿ ನಿಲಯದ ಸಹ ವ್ಯವಸ್ಥಾಪಕಿ ಶ್ರೀಮತಿ ವೀರಮ್ಮ ವಂದಿಸಿದರು. ವಸತಿ ನಿಲಯದ ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಸಾವಿತ್ರಿ ಕಣೆಮರಡ್ಕ ಕಾರ್ಯಕ್ರಮ ನಿರೂಪಿಸಿದರು. ಬೆಳ್ಳಾರೆ ಲಯನ್ಸ್ ಕ್ಲಬ್‌ನ ನಿಕಟಪೂರ್ವಾಧ್ಯಕ್ಷ ವಿಠಲ್ ಶೆಟ್ಟಿ, ಸದಸ್ಯೆ ಶ್ರೀಮತಿ ಭವಾನಿ ವಿ.ಶೆಟ್ಟಿ, ಸುಳ್ಯ ಲಯನ್ಸ್ ಕ್ಲಬ್‌ನ ಪೂರ್ವಾಧ್ಯಕ್ಷ ಸದಾನಂದ ಜಾಕೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೆ.ವಿ.ಜಿ. ಡೆಂಟಲ್ ಕಾಲೇಜಿನ ವೈದ್ಯ ಡಾ. ಸುಮನ್ ಹಲ್ಲುಗಳ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಕೆ.ವಿ.ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ದಂತ ತಪಾಸಣೆ ನಡೆಸಲಾಯಿತು.