ಪೆರಾಜೆ ಶ್ರೀ ಶಾಸ್ತಾವು ಸನ್ನಿಧಿಯಲ್ಲಿ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆಯು ಸೆ.14ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು, ಸೋಣ ಶನಿವಾರ ಪ್ರಯುಕ್ತ ಆಹಾರ ದಾನಿಗಳಾಗಿ ಸಹಕರಿಸಿದ ನಂಜಪ್ಪ ನಿಡ್ಯಮಲೆ, ಕೆ.ಬಿ. ಹೊನ್ನಪ್ಪ ಕೊಳಂಗಾಯ, ದೇವಸ್ಥಾನದ ದೇವತಕ್ಕರು, ತಕ್ಕ ಮುಖ್ಯಸ್ಥರುಗಳು, ಆಡಳಿತ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.