ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಣ ಶನಿವಾರ ಬಲಿವಾಡುಕೂಟ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ತಿಂಗಳ ಕೊನೆಯ ಶನಿವಾರದ ಪ್ರಯುಕ್ತ ಬಲಿವಾಡುಕೂಟವು ಸೆ.14ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.