ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

0

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆ ಇವುಗಳ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಕಬ್ಬಡಿ ಪಂದ್ಯಾಟ ಸೆ. 14 ರಂದು ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಎಲಿಮಲೆ ಸತ್ವಂ ಕ್ಲಿನಿಕ್ ನ ಡಾ.ಮಹೇಶ್ ರವರು ದೀಪ ಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಸುಳ್ಯ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ
ಶ್ರೀಮತಿ ಆಶಾ ನಾಯಕ್,
ಜ್ಞಾನದೀಪ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು, ಸಂಚಾಲಕ ತೀರ್ಥರಾಮ ಎ. ವಿ, ಶಾಲಾ ನಿರ್ದೇಶಕರುಗಳು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವೆಂಕಟರಮಣ ಹೊಸೊಳಿಕೆ, ಮುಖ್ಯ ಶಿಕ್ಷಕ ಗದಾಧರ ಬಾಳುಗೋಡು , ಶಾಲಾ ನಾಯಕ ಕೃಷ್ಣೇಶ್ ಸಿ ಎನ್, ಸುಳ್ಯ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಧನಂಜಯ, ಶಿಕ್ಷಣ ಸಂಯೋಜಕಿ
ಶ್ರೀಮತಿ ಸಂಧ್ಯಾಕುಮಾರಿ ಉಪಸ್ಥಿತರಿದ್ದರು.

ಪಂದ್ಯಾಟದಲ್ಲಿ 23 ಬಾಲಕರ ತಂಡ ಹಾಗೂ ಐದು ಬಾಲಕಿಯರ ತಂಡ ಭಾಗವಹಿಸಿದ್ದು, ಬಾಲಕಿಯ ವಿಭಾಗದಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ಪ್ರಥಮ ಸ್ಥಾನ ಪಡೆದುಕೊಂಡರೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸುಬ್ರಮಣ್ಯ ಪಡೆದುಕೊಂಡರೆ ದ್ವಿತೀಯ ಸ್ಥಾನವನ್ನು ಪಿ. ಎಮ್. ಶ್ರೀ.ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಪಡೆದುಕೊಂಡಿತು.