ಗ್ರಾ.ಪಂ. ಸಹಭಾಗಿತ್ವದಲ್ಲಿ ಸ್ಥಳೀಯ ಸಂಘ -ಸಂಸ್ಥೆಗಳ ಪದಾಧಿಕಾರಿಗಳು ಭಾಗಿ
ಕೂಲಿಶೆಡ್ ನಿಂದ ಒತ್ತೆಕೋಲ ಗದ್ದೆಯ ತನಕ ಹೆದ್ದಾರಿ ಬದಿಯಲ್ಲಿ ಬೃಹತ್ ಮಾನವ ಸರಪಳಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಸೆ.15ರಂದು ಜರುಗಿದ ಬೃಹತ್ ಮಾನವ ಸರಪಳಿಯಲ್ಲಿ ದ.ಕ. ಸಂಪಾಜೆ ಗ್ರಾಮ ಪಂಚಾಯತಿ ಸಹಭಾಗಿತ್ವದಲ್ಲಿ ಗ್ರಾಮದ ಸ್ಥಳೀಯ ಸಂಘ – ಸಂಸ್ಥೆಗಳು, ಶಾಲಾ ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು ಕೈಜೋಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಎಸ್.ಕೆ. ಹನೀಫ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರಿತಾ ಡಿಸೋಜ, ಸಂಪಾಜೆ ವರ್ತಕರ ಸಂಘದ ಅಧ್ಯಕ್ಷ ಯು.ಬಿ. ಚಕ್ರಪಾಣಿ ಸೇರಿದಂತೆ ಗ್ರಾ.ಪಂ. ಸದಸ್ಯರುಗಳು, ಸಹಕಾರಿ ಸಂಘದ ನಿರ್ದೇಶಕರುಗಳು, ಗ್ರಾ.ಪಂ. ವ್ಯಾಪ್ತಿಯ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಸ್ವಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘದ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಪರಸ್ಪರ ಕೈಹಿಡಿದು ಕಲ್ಲುಗುಂಡಿಯ ಕೂಲಿಶೆಡ್ ಬಳಿಯಿಂದ ವಿಷ್ಣುಮೂರ್ತಿ ದೈವದ ಒತ್ತೆಕೋಲ ಗದ್ದೆಯ ತನಕ ರಸ್ತೆಯ ಎಡಬದಿಯಲ್ಲಿ ಪರಸ್ಪರ ಕೈಜೋಡಿಸಿ ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದರು.