ಅರಂತೋಡು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ

0

ಅರಂತೋಡು ಗ್ರಾ.ಪಂ‌. ಸಹಭಾಗಿತ್ವದಲ್ಲಿ ಕೈಜೋಡಿಸಿದ ಶಾಲಾ – ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಸಂಘ -ಸಂಸ್ಥೆಗಳು

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಸೆ.15ರಂದು ಜರುಗಿದ ಬೃಹತ್ ಮಾನವ ಸರಪಳಿಯಲ್ಲಿ ಅರಂತೋಡು ಗ್ರಾಮ ಪಂಚಾಯತಿ ಸಹಭಾಗಿತ್ವದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳು, ಸೇರಿದಂತೆ ಗ್ರಾಮದ ಸ್ಥಳೀಯ ಸಂಘ – ಸಂಸ್ಥೆಗಳು ಕೈಜೋಡಿಸಿತ್ತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೇಶವ ಅಡ್ತಲೆ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್. ಸೇರಿದಂತೆ ಗ್ರಾ.ಪಂ. ಸದಸ್ಯರುಗಳು, ಸಹಕಾರಿ ಸಂಘದ ನಿರ್ದೇಶಕರುಗಳು, ಅರಂತೋಡಿನ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಸ್ವಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘದ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಅರಂತೋಡಿನ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಿಂದ ತೆಕ್ಕಿಲ್ ಸಭಾಭವನದ ತನಕ ರಸ್ತೆಯ ಎಡಬದಿಯಲ್ಲಿ ಪರಸ್ಪರ ಕೈಜೋಡಿಸಿ ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದರು.