ಕೊಡಗು ಸಂಪಾಜೆ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ

ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಯಿಂದ ಕೊಯನಾಡಿನ ತನಕ ಬೃಹತ್ ಮಾನವ ಸರಪಳಿ

0

ಸಂಪಾಜೆ ಗ್ರಾ.ಪಂ‌. ಸಹಭಾಗಿತ್ವದಲ್ಲಿ ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳ ಉಪಸ್ಥಿತಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಸೆ.15ರಂದು ಜರುಗಿದ ಬೃಹತ್ ಮಾನವ ಸರಪಳಿಯಲ್ಲಿ ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ಸಹಭಾಗಿತ್ವದಲ್ಲಿ ಗ್ರಾಮದ ವಿವಿಧ ಸಂಘ -ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಕೈಜೋಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೋಭಾರಾಣಿ, ಸೇರಿದಂತೆ ಇಲಾಖಾ ಮಟ್ಟದ ಅಧಿಕಾರಿ ವರ್ಗದವರು, ಗ್ರಾ.ಪಂ. ಸದಸ್ಯರುಗಳು, , ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಸ್ವಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘದ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಸೇರಿ ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಯಿಂದ ಕೊಯನಾಡಿನ ತನಕ ರಸ್ತೆಯ ಎಡಬದಿಯಲ್ಲಿ ಪರಸ್ಪರ ಕೈಜೋಡಿಸಿ ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದರು.