ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಹಿಂದಿ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

0

ಹಿಂದಿ ಅತ್ಯಂತ ಸರಳ ಹಾಗೂ ಸಮೃದ್ಧಿಯುಕ್ತ ಭಾಷೆ. – ಸುಶ್ಮಿತ ಜಾಕೆ

ಕೆವಿಜಿ ಅಮರ ಜ್ಯೋತಿ ಕಾಲೇಜಿನಲ್ಲಿ ಹಿಂದಿ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೆ. ೧೪ ರಂದು ಆಚರಿಸಲಾಯಿತು. ಕಾರ್ಯಕ್ರಮಕ್ಕೆ
ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಸಿಇಒ ಡಾ.ಉಜ್ವಲ್ ಯು ಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಖಲಿದಾ ನೂಹಾ ಅವರು ಸ್ವಾಗತಿಸಿ, ಖುಷಿ, ಅನಘ,ಪ್ರತಿಜ್ಞ,ಸೂರಜ್,ನಿಕೇತನ್ ಅವರು ವಿವಿಧ ಚಟುವಟಿಕೆಗಳನ್ನು ನಡೆಸಿಕೊಟ್ಟರು.

ಹಿಂದಿ ಉಪನ್ಯಾಸಕಿ ಶ್ರೀಮತಿ ಸುಶ್ಮಿತಾ ಜಾಕೆ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಯಾವುದೇ ಭಾಷೆಯ ಸಾಹಿತ್ಯವನ್ನು ಓದುವುದರಿಂದ ವಿದ್ಯಾರ್ಥಿಗಳಲ್ಲಿ ಮನಸ್ಸಿನ ವಿಕಾಸ, ಕಲ್ಪನಾ ಶಕ್ತಿ ಹೆಚ್ಚುತ್ತದೆ ಎಂದು ತಿಳಿಸಿದರು. ಕ್ವಿಜ್ ನಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಮಾನ್ಯ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರರವರು ಬಹುಮಾನವನ್ನು ವಿತರಿಸಿ ಶುಭಾಶಯವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಥಮ ಪಿ ಯು ವಾಣಿಜ್ಯದಿಂದ ವಂಶಿ, ದ್ವಿತೀಯ ವಾಣಿಜ್ಯದಿಂದ ಪ್ರೇಕ್ಷ, ಪ್ರಥಮ ವಿಜ್ಞಾನ ವಿಭಾಗದಿಂದ ಸಾನ್ವಿ, ದ್ವಿತೀಯ ವಿಜ್ಞಾನ ಪೃಥ್ವಿ ಎಂ,ಕಿರು ಪರೀಕ್ಷೆಯಲ್ಲಿ ಅಗ್ರ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.