ಸುಬ್ರಹ್ಮಣ್ಯದಲ್ಲಿ ಕೇಂದ್ರ ಕಛೇರಿ ಹೊಂದಿರುವ ಮಹಿಳೆಯರ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ. 15ರಂದು ಸುಬ್ರಹ್ಮಣ್ಯ ಗ್ರಾ.ಪಂ.ನ ರಾಜೀವ್ ಗಾಂಧಿ ಸೇವಾ ಕೇಂದ್ರದ ಕುಮಾರಧಾರಾ ಸಭಾಂಗಣದಲ್ಲಿ ಸಂಘದ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್. ರೈಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್ ರೈ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸುತ್ತಾ ಸಂಘವು ವರದಿ ಸಾಲಿನಲ್ಲಿ 68.13 ಕೋಟಿ ವ್ಯವಹಾರ ನಡೆಸಿ 10.25 ಲಕ್ಷ ಲಾಭಗಳಿಸಿದೆ. ಸದಸ್ಯರಿಗೆ ಶೇ. 9 ಡಿವಿಡೆಂಟ್ ನೀಡಲಾಗುವುದು. ಸುಬ್ರಹ್ಮಣ್ಯದಲ್ಲಿ ಪ್ರಧಾನ ಕಚೇರಿ ಹೊಂದಿರುವ ನಮ್ಮ ಸಂಘ ಈಗಾಗಲೇ ಸುಳ್ಯ, ಬೆಳ್ಳಾರೆ ಮತ್ತು ಜಾಲ್ಸೂರಿನಲ್ಲಿ ಶಾಖೆಗಳನ್ನು ಹೊಂದಿದ್ದು, ಸಂಘವನ್ನು ಬೆಳೆಸುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕಡಬದಲ್ಲಿ ಶಾಖೆಯನ್ನು ತೆರೆಯುವ ಯೋಜನೆಯನ್ನು ಇಟ್ಟುಕೊಂಡಿದ್ದೇವೆ ಎಂದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಾರಿಜಾಕ್ಷಿ ಪಿ ವಾರ್ಷಿಕ ವರದಿ, ಲೆಕ್ಕಪತ್ರ ಮಂಡಿಸಿದರು. ಸಂಘದ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ಉಪ್ಪಳಿಕೆ, ನಿರ್ದೇಶಕರಾದ ಶ್ರೀಮತಿ ವಿಮಲಾ ರಂಗಯ್ಯ, ಶ್ರೀಮತಿ ಚಂದ್ರಾಕ್ಷಿ ಜೆ ರೈ, ಶ್ರೀಮತಿ ಫಮಿದಾ ಸಂಶುದ್ದೀನ್, ಶ್ರೀಮತಿ ಅನಸೂಯಾ ಬಿ.ಎ, ಶ್ರೀಮತಿ ಸುವರ್ಣಿನಿ ಎನ್.ಎಸ್, ಶ್ರೀಮತಿ ಶೋಭ ನಲ್ಲೂರಾಯ, ಶ್ರೀಮತಿ ಸುಜಾತ ಗಣೇಶ್, ಶ್ರೀಮತಿ ಶ್ಯಾಮಲಾ ಮೋಹನ್, ಶ್ರೀಮತಿ ಲೀಲಾ ಮನಮೋಹನ್, ಶ್ರೀಮತಿ ತಾರಾ ಮಲ್ಲಾರ, ಶ್ರೀಮತಿ ದಿವ್ಯಕಲಾ, ಶ್ರೀಮತಿ ಉದಯಕುಮಾರಿ, ಶ್ರೀಮತಿ ತ್ರಿವೇಣಿ ದಾಮ್ಲೆ ಮತ್ತು ಶ್ರೀಮತಿ ಸೌಮ್ಯ ಬಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಸಿಬ್ಬಂದಿ ವರ್ಗ ಸಹಕಾರ ನೀಡಿದರು. ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ನಿರ್ದೇಶಕಿ ಶ್ರೀಮತಿ ವಿಮಲಾ ರಂಗಯ್ಯರ ನೇತೃತ್ವದಲ್ಲಿ ಸಂಘದ ಸದಸ್ಯೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು. ಸಂಘದ ಲೆಕ್ಕಿಗರಾದ ಶ್ರೀಮತಿ ಸಂಧ್ಯಾ ಸಿ. ರಾವ್ ಸುಬ್ರಹ್ಮಣ್ಯ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ಉಪ್ಪಳಿಕೆಯವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.