ನವೆಂಬರ್ 23 ರಂದು ಅರಂತೋಡಿನಲ್ಲಿ 27 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

0

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ನವಂಬರ್ 23ರಂದು ನಡೆಸುವುದೆಂದು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 16ರಂದು ಸ್ವಾಗತ ಸಮಿತಿ ರಚನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.


ಸ್ವಾಗತ ಸಮಿತಿ ರಚನಾ ಸಭೆಯು ತಾಲೂಕು ಕನ್ನಡ ಸಾಹಿತ್ಯ ಸಮಿತಿ ಅಧ್ಯಕ್ಷ ಚಂದ್ರಶೇಖರ ಪೇರಾಲು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಚಂದ್ರಶೇಖರ ಪೇರಾಲ್ ರವರು ಪ್ರಾಸ್ತಾವಿಕವಾಗಿ ಸಾಹಿತ್ಯ ಸಮ್ಮೇಳನದ ಬಗ್ಗೆ ಮಾತನಾಡಿದರು. ಬಳಿಕ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಸಂಚಾಲಕರು, ಸಾಹಿತ್ಯ ಸಮ್ಮೇಳನದ ಮಾರ್ಗದರ್ಶಕರು ಆದ ಕೆ ಆರ್ ಗಂಗಾಧರ್ ಸ್ವಾಗತ ಸಮಿತಿ ಹಾಗೂ ವಿವಿಧ ಸಮಿತಿಗಳ ಬಗ್ಗೆ ಮಾತನಾಡಿದರು.


27ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಗೌರವಾಧ್ಯಕ್ಷರಾಗಿ ಶಾಸಕರಾದ ಕುಮಾರಿ ಭಾಗೀರಥಿ, ಅರಂತೋಡು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಬಿ ಬಿ ದಿವಾಕರ ರೈ, ಪೋಷಕಾಧ್ಯಕ್ಷರಾಗಿ ಡಾ. ಕೆ ವಿ ಚಿದಾನಂದ, ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ಹಾಗೂ ಆರಂತೋಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೇಶವ ಆಡ್ತಲೆ ಇವರನ್ನು ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿಗಳಾಗಿ ಅಬ್ದುಲ್ಲಾ ಅರಂತೋಡು ಹಾಗೂ ಕಿಶೋರ್ ಕುಮಾರ್ ಕಿರ್ಲಾಯ ಇವರನ್ನು ಆಯ್ಕೆ ಮಾಡಲಾಯಿತು. ಸ್ವಾಗತ ಸಮಿತಿಯ ವಿವಿಧ ಉಪ ಸಮಿತಿಗಳನ್ನು ರಚನೆ ಮಾಡಿ ಅದಕ್ಕೆ ಸಂಚಾಲಕರು ಹಾಗೂ ಸದಸ್ಯರನ್ನು ನೇಮಕ ಮಾಡಿ ಸಭೆಯ ಅನುಮೋದನೆ ಪಡೆದುಕೊಳ್ಳಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಸಾಹಿತ್ಯ ಸಮಿತಿಯ ಸದಸ್ಯರಾದ ರಾಮಚಂದ್ರ ಪಲ್ಲತಡ್ಕ, ಸುಳ್ಯ ಹೋಬಳಿ ಘಟಕದ ಅಧ್ಯಕ್ಷರಾದ ಚಂದ್ರಾವತಿ ಬಡ್ಡಡ್ಕ, ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಕೇಶವ ಅಡ್ತಲೆ, ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ವಾಗ್ಲೆ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಸೀತಾರಾಮ.ಯಮ್ ಕೆ ಉಪಸ್ಥಿತರಿದ್ದರು.

ಸಭೆಯಲ್ಲಿ ತಾಲೂಕು ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಹೋಬಳಿ ಘಟಕದ ಪದಾಧಿಕಾರಿಗಳು, ಅರಂತೋಡು ಹಾಗೂ ತೊಡಿಕಾನ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು. ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕಿರ್ಲಾಯ ಸ್ವಾಗತಿಸಿದರು. ಕಸಪಾ ತಾಲೂಕು ಘಟಕದ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಲ ವಂದಿಸಿದರು.