ವಿದ್ಯಾ ಭಾರತಿ ವತಿಯಿಂದ ನಡೆಯುವ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರಾಜ್ಯಮಟ್ಟದ ಖೋ ಖೋ ಪಂದ್ಯಾಟವು ಆಂಧ್ರಪ್ರದೇಶದಲ್ಲಿ ನಡೆದಿದ್ದು ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಮಯೂರ್ ಗೌಡ ಎನ್. ಪಿ ನಡುತೋಟ- ಗುಡ್ಡೆಮನೆ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ರಾಜ್ಯಮಟ್ಟದ ಕ್ರೀಡಾಕೂಟವು ಆಂಧ್ರಪ್ರದೇಶದ ತೆಲಂಗಾಣದಲ್ಲಿ ನಡೆದಿದ್ದು ತೆಲಂಗಾಣ ಮತ್ತು ತೆಲಂಗಾಣ ರಾಜ್ಯದೊಂದಿಗೆ ವಿಜೇತರಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ರಾಷ್ಟ್ರಮಟ್ಟದ ಕ್ರೀಡಾಕೂಟವು ಮಧ್ಯಪ್ರದೇಶದಲ್ಲಿ ನಡೆಯಲಿದ್ದು ಇವರು ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಮಧ್ಯಪ್ರದೇಶದ ಹರಿಯಾಣದಲ್ಲಿ ಅಕ್ಟೋಬರ್ ತಿಂಗಳಲ್ಲಿ ನಡೆಯಲಿದೆ. ಮಯೂರ್ ಗೌಡ ಎಸ್ ಪಿ ನಡು ತೋಟ ಗುಡ್ಡೆ ಮನೆ ಇವರು ರಾಮಕುಂಜೇಶ್ವರ ಇಂಗ್ಲೀಷ್ ಮೀಡಿಯಂ ಹೈ ಸ್ಕೂಲ್ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿ ಮತ್ತು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ.
ಮಯೂರ್ ಅವರು ಬಾಳುಗೋಡು ಗುಡ್ಡೆಮನೆ ನಿವಾಸಿ ಶ್ರೀಮತಿ ಹೇಮಲತಾ ಪದ್ಮನಾಭ ದಂಪತಿಯ ಪುತ್ರ.