ಐವರ್ನಾಡು: ಪ್ರೌಢಶಾಲಾ ವಿಭಾಗದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

0

ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಗೆ ದ್ವಿತೀಯ ಸಮಗ್ರ ಪ್ರಶಸ್ತಿ

ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಪ್ರತಿಭಾ ಕಾರಂಜಿಯಲ್ಲಿ ಪ್ರೌಢಶಾಲೆಯ ಒಟ್ಟು ಮೂವತ್ತು ಮಂದಿ ವಿದ್ಯಾರ್ಥಿಗಳು ಭಾಗವಹಿಸಿ 4 ಪ್ರಥಮ, 8 ದ್ವಿತೀಯ ಮತ್ತು 6 ತೃತೀಯ ಬಹುಮಾನಗಳನ್ನು ಗಳಿಸಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.