ಆಲೆಟ್ಟಿ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ ಸುಳ್ಯ ಮತ್ತು ಷರಾ ಪ್ರಕಾಶನ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಸಿದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಆಲೆಟ್ಟಿ ವಾಲ್ಮೀಕಿ ಆಶ್ರಮ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು ಪ್ರೋತ್ಸಾಹಕವಾಗಿ ಪ್ರಮಾಣ ಪತ್ರ ನೀಡಲಾಯಿತು.


ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಕಾವ್ಯ ಹಾಗೂ ಆಧ್ಯಾಪಕ ವೃಂದದವರು, ಆರೋಗ್ಯ ಸಹಾಯಕಿ ಸೌಮ್ಯ ಮತ್ತು ಆಶಾ ಕಾರ್ಯಕರ್ತೆ ಉಷಾಕಿರಣ ಆಲೆಟ್ಟಿ ಉಪಸ್ಥಿತರಿದ್ದರು. ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.