ಪೆರುವಾಜೆ ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ ಸುಳ್ಯ ಮತ್ತು ಷರಾ ಪ್ರಕಾಶನ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಸಿದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು ಪ್ರೋತ್ಸಾಹಕವಾಗಿ ಪ್ರಮಾಣ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ತೇಜಪ್ಪ ಎಸ್.,ಶಿಕ್ಷಕರಾದ ಶ್ರೀಮತಿ ರತ್ನಾವತಿ,ಶ್ರೀಮತಿ ಶ್ರುತಿ, ಸುದ್ದಿ ಪ್ರತಿನಿಧಿ ಪ್ರೇಮಚಂದ್ರ ಬೆಳ್ಳಾರೆ, ವರದಿಗಾರ ಗಣೇಶ್ ಕುಕ್ಕುದಡಿ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.