ಅಕ್ಟೋಬರ್ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ
2024-25ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಅರ್ಹ ಪಿಯುಸಿ ಸಮಾನಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಮತ್ತು ಪ್ರವರ್ಗ-1 ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15.09.2024 ಕ್ಕೆ ನಿಗಧಿಪಡಿಸಲಾಗಿತ್ತು.
ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡ ಕಾರಣ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15.10.2024 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.