ಅರಂತೋಡು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು.ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಂಪಾಜೆ ವಲಯ ಇದರ ಆಶ್ರಯದಲ್ಲಿ ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಜನಜಾಗೃತಿ ವೇದಿಕೆ ಇದರ ಅಧ್ಯಕ್ಷರಾದ ಲೋಕನಾಥ ಅಮೆಚೂರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

 ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ  ಶ್ರೀಮತಿ ಡಾ. ಅನುರಾಧ ಕುರುಜಿ ಇವರು  ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶ ಮಕ್ಕಳು ಇತ್ತೀಚಿಗಿನ ದಿವಸದಲ್ಲಿ ಪುಸ್ತಕದ ಜೊತೆಗೆ ವಿದ್ಯಾಭ್ಯಾಸವನ್ನು ಉತ್ತಮ ರೀತಿಯಲ್ಲಿ ಬೆಳೆಸುವುದರ ಜೊತೆಗೆ ದುಶ್ಚಟಗಳ ಬಗ್ಗೆ, ಮೊಬೈಲ್ ಬಳಕೆ ಕಡಿಮೆ ಮಾಡುವುದು, ಗಾಂಜಾ, ಅಫೀಮು, ಬೀಡಿ, ಸಿಗರೇಟ್, ಗುಡ್ಕ, ಇದರಿಂದ ದೂರ ಇರುವಂತೆ ಇಂತಹ ಹಲವಾರು ವಿಚಾರಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಲಯ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಸೋಮಶೇಖರ್ ಪೈಕ ಹಾಗೂ ಅರಂತೋಡು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರತ್ನಾವತಿ ಅಳಿಕೆಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜು ಪ್ರಾಂಶುಪಾಲರಾದ ಸುರೇಶ್ ವಾಗ್ಲೆ ಅವರು ಇಂತಹ ಕಾರ್ಯಕ್ರಮಗಳು ನಮ್ಮ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಿದ್ದು ಸಂಪನ್ಮೂಲ ವ್ಯಕ್ತಿಗಳು ಹೇಳಿದ ಮಾಹಿತಿಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿ ಉತ್ತಮ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿಗಳಾದ ಸುಪ್ರಿತ.ಕೆ, ಕಲ್ಪನಾ, ಸುಂದರ ಹಾಗೂ ವಿ ಎಲ್ ಎ ಪುನೀತ್ ರವರು ಉಪಸ್ಥಿತರಿದ್ದರು.
ಉಪನ್ಯಾಸಕ ಮೋಹನ್ ಚಂದ್ರ ವಂದಿಸಿದರು. ವಲಯ ಮೇಲ್ವಿಚಾರಕರಾದ ಗಂಗಾಧರ್ ಅವರು ಸ್ವಾಗತಿಸಿ, ಕಾರ್ಯಕ್ರಮ ನೆರವೇರಿಸಿದರು.