ಸುಬ್ರಹ್ಮಣ್ಯ ಕೆ ಎಸ್ ಎಸ್ ಪದವಿ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ಸುಬ್ರಹ್ಮಣ್ಯ ಕೆ ಎಸ್ ಎಸ್ ಪದವಿ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಜನಜಾಗೃತಿ ವೇದಿಕಯ‌ ಮಾಜಿ ಅಧ್ಯಕ್ಷೆ ಶ್ರೀಮತಿ ವಿಮಲರಂಗಯ್ಯ ಉದ್ಘಾಟಿಸಿ ದುಶ್ಚಟ- ದುರಭ್ಯಾಸದಿಂದ ಮಕ್ಕಳ ಮೇಲೆ ಆಗುವ ಪರಿಣಾಮದ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಕೆ ಎಸ್ ಎಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ.ದಿನೇಶ್ ಪಿ ಟಿ ಸಭಾಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ರವರು “ಕುಡಿತ ಡ್ರಗ್ಸ್ ಮುಂತಾದ ದುಶ್ಚಟದಿಂದ ಹೇಗೆ ತಮ್ಮನ್ನು ತಾವು ಕಾಪಾಡಿಕೊಳ್ಳುವುದು” ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ನಶೆ ಎಂಬ ನರಕ ಎಂಬ ಸಿನಿಮಾ ತೋರಿಸಿ ಮಕ್ಕಳಲ್ಲಿ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷ ತೀರ್ಥರಾಮ ದೋಣಿಪಳ್ಳ, ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪವಿತ್ರ ದಿನೇಶ್ , ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಶ್ರೀಲತಾ , ಮೇಲ್ವಿಚಾರಕ ಕೃಷ್ಣಪ್ಪ ಎಂ , ಸೇವಾಪ್ರತಿನಿಧಿ ಹರಿಣಾಕ್ಷಿ ಸೇವಾಪ್ರತಿನಿಧಿ, ವಿ ಎಲ್ ಇ ಶಶಿಕಲಾ ಉಪಸ್ಥಿತರಿದ್ದರು.