ಕೊ. ಸಂಪಾಜೆ ಗ್ರಾ.ಪಂ.ನಲ್ಲಿ ಪೋಷಣ್ ಅಭಿಯಾನ

0


ಕೊ. ಸಂಪಾಜೆ ಗ್ರಾ.ಪಂ.ನಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಸೆ. ೧೭ರಂದು ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರಮಾದೇವಿ ಕಳಗಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಪ್ರಭಾರ ಶಿಶು ಅಭಿವೃದ್ಧಿ ಅಧಿಕಾರಿ ಶೀಲಾವತಿ ಪ್ರಾಸ್ತಾವಿಕ ಮಾತನಾಡಿದರು. ಸಿ.ಎಚ್.ಒ. ಡಾ. ಅರ್ಚನಾರವರು ವೈದ್ಯಕೀಯ ಸಲಹೆ, ಮಾಹಿತಿ ನೀಡಿದರು.


ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ನವೀನ ಡಿ.ಎಂ., ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ಕಾರ್ಯದರ್ಶಿ ಸೀತಾರಾಮ, ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.


ಕಾರ್ಯಕ್ರಮಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಕಾರ್ಯಕರ್ತೆಯರು, ಹಾಗೂ ಮಾತೆಯರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಸತ್ಯವತಿ ಸ್ವಾಗತಿಸಿ, ಕುಸುಮಾ ಕನ್ಯಾನ ವಂದಿಸಿದರು.