ಐವರ್ನಾಡು ಸ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳು ಖೋ‌ಖೋ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯಾಬೋಧಿನಿ ವಿದ್ಯಾ ಸಂಸ್ಥೆ ಬಾಳಿಲ ಇದರ ಸಹಯೋಗದೊಂದಿಗೆ ನಡೆದ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ದಲ್ಲಿ ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ, ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಮಾಲತಿ ಬೆಳ್ಳಾರೆ ತರಬೇತಿ ನೀಡಿರುತ್ತಾರೆ.