ಮಡಿಕೇರಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಾಲಿಬಾಲ್ ಕ್ರೀಡಾಕೂಟ

0

ಸಂಪಾಜೆ ಪ್ರೌಢ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೊಡಗು ಮೂರ್ನಾಡಿನ ಜ್ಞಾನ ಜ್ಯೋತಿ ಎಜ್ಯುಕೇಶನ್ ಸೊಸೈಟಿ ಮತ್ತು ಮಡಿಕೇರಿ ಶಿಕ್ಷಣ ಇಲಾಖೆ ನಡೆಸಿದ ಪ್ರೌಢಶಾಲಾ ಬಾಲಕಿಯರ ವಾಲಿಬಾಲ್ ಕ್ರೀಡಾ ಕೂಟದಲ್ಲಿ ಸಂಪಾಜೆ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳನ್ನು ಪ್ರೌಢ ಶಾಲಾ ದೈಹಿಕ ಶಿಕ್ಷಕ ಕುಶಾಲಪ್ಪ ಅವರು ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು, ಕಾಲೇಜು ಪ್ರಾಂಶುಪಾಲರು, ಶಿಕ್ಷಕ ವೃಂದ ಉಪಾನ್ಯಾಸಕ ವೃಂದ ಅಭಿನಂದಿಸಿದ್ದಾರೆ.