ಉಬರಡ್ಕ ಮಿತ್ತೂರು ಗ್ರಾ.ಪಂನಲ್ಲಿ ಜಮಾಬಂಧಿ

0

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ 2023-24 ನೇ ಸಾಲಿನ ಜಮಾಬಂಧಿಯು ಸೆ.18 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ನ ಕಾರ್ಯನಿರ್ವಣಾಧಿಕಾರಿ ರಾಜಣ್ಣ ರವರು ಜಮಾಬಂಧಿ ನಡೆಸಿಕೊಟ್ಟರು.
ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ರವಿಚಂದ್ರ ಎ, ಉಪಾಧ್ಯಕ್ಷೆ ಶ್ರೀಮತಿ ಚಿತ್ರಕುಮಾರಿ, ಸದಸ್ಯರಾದ ಪ್ರಶಾಂತ್ ಪಾನತ್ತಿಲ, ಅನಿಲ್ ಬಳ್ಳಡ್ಕ, ಶ್ರೀಮತಿ ಭವಾನಿ ಮೂರ್ಜೆ, ಶ್ರೀಮತಿ ಮಮತಾ ಕುದ್ಪಾಜೆ, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.