ಸುಬ್ರಹ್ಮಣ್ಯ ಕೆ ಎಸ್ ಎಸ್ ಕಾಲೇಜಿನಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಭರವಸಾ ಕೋಶ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಹಯೋಗದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಸೆ. 18 ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ ಪಿ ಟಿ ವಹಿಸಿದ್ದರು. ಕಾರ್ಯಕ್ರಮವನ್ನು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ತೇಜು ಕೊಲ್ಲಮೊಗ್ರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಚಂದ್ರಾವತಿ ಬಡ್ಡಡ್ಕ, ಲತಾ ದೇವಿ ಪ್ರಸಾದ್ ಕುತ್ಪಾಜೆ , ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ. ಟಿ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಸುಮಿತ್ರ , ಪುಷ್ಪ ಮತ್ತು ಅರೆಭಾಷೆ ಸಂಘದ ಅಧ್ಯಕ್ಷರಾದ ಶ್ರೀ ಶಾಂತ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಅರೆಭಾಷೆ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.