ಬಳ್ಪ: ಪೋಷಣ್ ಮಾಸಾಚರಣೆ

0

ಕರ್ನಾಟಕ ಸರ್ಕಾರ ದ. ಕ. ಜಿ.ಪಂ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಳ್ಪ ಗ್ರಾಮ ಪಂಚಾಯತ್, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳ್ಪ, ಯಶಸ್ವಿ ಸ್ತ್ರೀ ಶಕ್ತಿ ಗೊಂಚಲು ಬಳ್ಪ, ಸಂಜೀವಿನಿ ಒಕ್ಕೂಟ ಬಳ್ಪ ಇದರ ಜಂಟಿ ಆಶ್ರಯದಲ್ಲಿ ಸೆ. 18ರಂದು ಬಳ್ಪ ಗ್ರಾ.ಪಂ. ಸಭಾಂಗಣದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ತ್ರೀ ಶಕ್ತಿ ಗೊಂಚಲಿನ ಅಧ್ಯಕ್ಷೆ ಶ್ರೀಮತಿ ಉಷಾ ವಿ.ರೈ ವಹಿಸಿಕೊಂಡಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ರವಿಶ್ರೀ ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ಪೋಷಣ್ ಅಭಿಯಾನ ಮಾಸಾಚರಣೆ ರಕ್ತಹೀನತೆ, ಮಕ್ಕಳ ಬೆಳವಣಿಗೆ ಪರಿಶೀಲನೆ ಪೂರಕ ಆಹಾರ, ಪೋಷಣ್ ಭೀ ಪಡಾಯಿ ಭೀ, ಉತ್ತಮ ಹಾಗೂ ಪಾರದರ್ಶಕ ಆಡಳಿತ ನಿರ್ವಹಣೆಗಾಗಿ ತಂತ್ರಜ್ಞಾನದ ಅರಿವು ಮತ್ತು ತಾಯಿಯ ಹೆಸರಿನಲ್ಲಿ ಗಿಡ ನೆಡುವ ಅಭಿಯಾನದ ಕುರಿತು ಮಾಹಿತಿ ನೀಡಿದರು. ಪೌಷ್ಟಿಕ ಆಹಾರ ಸಪ್ತಾಹದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷ ಹರ್ಷಿತ್ ಕಾರ್ಜ ನೆರವೇರಿಸಿ ಪೋಷಣ್ ಅಭಿಯಾನದ ಬಗ್ಗೆ ಶುಭಹಾರೈಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ ತಾಲೂಕಿನ ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಪ್ರಮೀಳಾ ರಕ್ತಹೀನತೆ, ಸಮತೋಲನ ಆಹಾರ, ಮಹಿಳೆಯರ ಆರೋಗ್ಯ ಪೂರಕ ಪೌಷ್ಠಿಕ ಆಹಾರ, ಸ್ಥಳೀಯ ಪೌಷ್ಠಿಕಾಂಶ ಆಹಾರದ ಬಗ್ಗೆ ಹಾಗೂ ಕೈತೋಟ ನಿರ್ವಹಣೆ, ಕಿಶೋರಿಯರಿಗೆ ಋತುಸ್ರಾವದ ಬಗ್ಗೆ ಮತ್ತು ಲಿಂಗಾಧಾರಿತ ಗಂಡು ಹೆಣ್ಣು ಸಮಾನತೆಯ ಬಗ್ಗೆ ಸವಿವರ ನೀಡಿದರು. ಬಳ್ಪ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಮಟ್ಟದ ಗ್ರಾಮ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿಯನ್ನು ಹಮ್ಮಿಕೊಳ್ಳಲಾಯಿತು. ರಕ್ತಹೀನತೆ ಮುಕ್ತ ಗ್ರಾಮ ಪಂಚಾಯತ್, ಮಾನಸಿಕ ಆರೋಗ್ಯ ನಿರ್ವಹಣೆ, ಕಿಶೋರಿಯರಿಗೆ ಋತುಸ್ರಾವದ ಬಗ್ಗೆ ಅರಿವು, ಪೌಷ್ಟಿಕ ಆಹಾರದಿಂದ ಆರೋಗ್ಯ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ನಾರಾಯಣರು ಸ್ವಚ್ಛತಾ ಆಂದೋಲನ ದ ಬಗ್ಗೆ ಮಾಹಿತಿ ನೀಡಿದರು. ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಇವರು ಚುಚ್ಚುಮದ್ದಿನ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಬಳ್ಪ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಗಿರಿಜಾ, ಗ್ರಾಮ ಪ್ರತಿಷ್ಠಾನದ ಅಧ್ಯಕ್ಷ ವಿನೋದ್ ಬೊಳ್ಮಲೆ, ಗ್ರಾ.ಪಂ. ಉಪಾಧ್ಯಕ್ಷೆ ಪಾರ್ವತಿ ಪಿ.ಡಿ ಉಪಸ್ಥಿತರಿದ್ದರು. ಬಳ್ಪ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮೋಹಿನಿ ಸ್ವಾಗತಿಸಿದರು.

ಕೇನ್ಯ ಅಂಗನವಾಡಿ ಕಾರ್ಯಕರ್ತೆ ಮಮತಾ ವಂದಿಸಿದರು. ಶ್ರೀಮತಿ ವನಜಾ ಎಸ್.ರೈ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸದಸ್ಯರುಗಳು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಆರೋಗ್ಯ ಕಾರ್ಯಕರ್ತೆಯರು, ಕಿಶೋರಿಯರು, ಪಂಚಾಯತ್ ಸಿಬ್ಬಂದಿಗಳು, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಪೌಷ್ಟಿಕ ಆಹಾರ ತಯಾರಿಸಿದವರಿಗೆ ಬಹುಮಾನವನ್ನು ವಿತರಿಸಲಾಯಿತು.