ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನಿ ವಿದ್ಯಾ ಸಂಸ್ಥೆಗಳು ಬಾಳಿಲ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸೆ. 17ರಂದು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರುಗಿತು.
ಪಂದ್ಯಾಟದ ಉದ್ಘಾಟನೆಯನ್ನು ವಿದ್ಯಾಬೋಧಿನಿ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ದೀಪ ಬೆಳಗಿಸಿ ನೆರವೇರಿಸಿದರು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಅಧ್ಯಕ್ಷ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಆಶಾ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪಾವನ ಜೋಗಿಬೆಟ್ಟು ಕಾರ್ಯಕ್ರಮಕ್ಕೆ ಶುಭ ಕೋರಿದರು.
ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ ಒನ್ ಇದರ ಅಧ್ಯಕ್ಷ ಸೂಪಿ ಪೆರಾಜೆ, ಸುಳ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ, ವಿದ್ಯಾಬೋಧಿನೀ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಧನಂಜಯ ಶೆಟ್ಟಿ, ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರುಕ್ಮಯ್ಯ ನಾಯ್ಕ, ತೀರ್ಪುಗಾರರಾದ ಮೋಹನ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯರಾದ ನಾರಾಯಣ ಬಿ, ಸುಭಾಷ್ಚಂದ್ರ ರೈ ತೋಟ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ನಿತ್ಯಶ್ರೀ, ಸಾಯಿ ಸುನಿಷ್ಕ, ರಕ್ಷ ಆರ್ ಕೆ, ಶ್ರಾವ್ಯ, ಛಾಯಾ ಇವರ ಪ್ರಾರ್ಥಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಯಶೋಧರ ನಾರಾಲು ಸ್ವಾಗತಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಉದಯಕುಮಾರ್ ರೈ ಎಸ್ ವಂದಿಸಿದರು. ಪ್ರೌಢಶಾಲಾ ಶಿಕ್ಷಕರಾದ ಲೋಕೇಶ್ ಬಿ ಕಾರ್ಯಕ್ರಮ ನಿರೂಪಿಸಿದರು.