ಗುತ್ತಿಗಾರು ಪಿ.ಯಂ.ಶ್ರೀ.ಹಿ.ಪ್ರಾ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

0

ಪ್ರಾಥಮಿಕ ಶಾಲಾ 14 ತಂಡಗಳು ಭಾಗಿ

ದ.ಕ ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಪಿ.ಎಂ ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಸರ್ಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಪ್ರೌಢಶಾಲಾ ವಿಭಾಗ ಈ ಸಂಸ್ಥೆಗಳ ಸಯುಕ್ತ ಆಶಯದಲ್ಲಿ ನಡೆಯುವ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ ಸೆ. 20 ರಂದು ಗುತ್ತಿಗಾರು ಪಿ.ಯಂ.ಶ್ರೀ.ಹಿ.ಪ್ರಾ ಶಾಲಾ ಮೈದಾನದಲ್ಲಿ ಉದ್ಘಾಟನೆಗೊಂಡಿತು.

ಆರಂಭದಲ್ಲಿ ಪ್ರಾಥಮಿಕ ಶಾಲೆಯಿಂದ ಗಣ್ಯ ಅತಿಥಿಗಳೊಂದಿಗೆ ಚೆಂಡೆಯೊಂದಿಗೆ ಮೆರವಣಿಗೆಯಲ್ಲಿ ಶಾಲಾ ಕ್ರೀಡಾಂಗಣಕ್ಕೆ ಬರಲಾಯಿತು. ವೇದಿಕೆ ಬಳಿ ಭಾರತ ಮಾತೆಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಸಭೆಯ ಅಧ್ಯಕ್ಷತೆಯನ್ನು ಪಿ.ಎಂ. ಶ್ರೀ.ಸ.ಮಾ.ಹಿ. ಪ್ರಾ ಶಾಲೆ ಇದರ ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಜಿ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಮುತ್ಲಾಜೆ, ಕಬಡ್ಡಿ ಅಸೋಸಿಯೇಷನ್ ನ ಮಾಧವ ಬಿ.ಕೆ, ಪ್ರೌಢಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಕೇಶವ ಗೌಡ ಕಾಂತಿಲ, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಜಯಾ, ಸುಳ್ಯ ದೈಹಿಕ ಪರಿವೀಕ್ಷಕರಾದ ಆಶಾ ನಾಯಕ್, ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಧನಲಕ್ಷ್ಮೀ, ಶಿಕ್ಷಣ ಸಂಯೋಜಕಿ ಸಂಧ್ಯಾಕುಮಾರಿ, ಗ್ರೇಡ್ ವನ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೂಫಿ ಪೆರಾಜೆ, ಕ್ರೀಡಾ ಅಧಿಕಾರಿ ದೇವರಾಜ್ ಮುತ್ಲಾಜೆ, ಜಯ ರಾಮ ಕಡ್ಲಾರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ್, ವಲಯ ಸಮೂಹ ಸಂಪನ್ಮೂಲ ಅಧಿಕಾರಿ ಕುಶಾಲಪ್ಪ ತುಂಬತ್ತಾಜೆ, ಶಿಕ್ಷಣ ಇಲಾಖೆಯ ನಿವೃತ್ತ ನೌಕರ ತೀರ್ಥರಾಮ ಹೊಸೊಳಿಕೆ, ಎಸ್ ಡಿ ಎಂ ಸಿ ಸದಸ್ಯೆ ಪ್ರಸನ್ನ, ಸರ್ಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರಾಂಶುಪಾಲೆ ಚೆನ್ನಮ್ಮ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸಾವಿತ್ರಿ, ಪಿ.ಎಂ .ಶ್ರೀ ಶಾಲಾ ಮುಖ್ಯೋಪಾಧ್ಯಾಯಿನಿ ಉಮಾವತಿ, ,
ಪ್ರಾಥಮಿಕ ದೈಹಿಕ ಶಿಕ್ಷಣ ಸಂಘ ಅಧ್ಯಕ್ಷ ಧನಂಜಯ ಎನ್,
ಕಬಡ್ಡಿ ಪಂದ್ಯಾಟ ಸಂಘಟನಾ ಉಪಾಧ್ಯಕ್ಷ ದಿನೇಶ್ ಹಾಲೆಮಜಲು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಸ್ವಾಗತಿಸಿದರು. ಕಿಶೋರ್ ಕುಮಾರ್, ಧನಂಜಯ ಕಾರ್ಯಕ್ರಮ ನಿರೂಪಿಸಿದರು.