ಸೆ. 23: ಸುಳ್ಯದಲ್ಲಿ ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಾನೂನು ಅರಿವು ಕಾರ್ಯಕ್ರಮ

0

ವಕೀಲರ ಸಂಘ ಸುಳ್ಯ, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ,
ಇವುಗಳ ಸಂಯುಕ್ತ ಆಶ್ರಯದಲ್ಲಿ
ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಾನೂನು ಅರಿವು ಕಾರ್ಯಕ್ರಮ ಸೆ. 23ರಂದು ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಆಲೆಟ್ಟಿ ಮಿತ್ತಡ್ಕದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಬಿ. ಮೋಹನ್ ಬಾಬು ನೆರವೆರಿಸಲಿದ್ದಾರೆ. ಅಧ್ಯಕ್ಷತೆಯನ್ನು ರೋಟರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ರೊ. ಎಮ್ ಯೋಗಿತಾ ಗೋಪಿನಾಥ್ ವಹಿಸಲಿದ್ದಾರೆ. ಅನೇಕ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.