ಸುಳ್ಯ ತಾಲೂಕು ಯಾದವ ಸಭಾದ ವಾರ್ಷಿಕ ಮಹಾಸಭೆಯು ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪರೆ ಅವರ ಅಧ್ಯಕ್ಷತೆಯಲ್ಲಿ ಶಿವಕೃಪಾ ಕಲಾಮಂದಿರದಲ್ಲಿ ಸೆ.22ರಂದು ನಡೆಯಿತು.
ವೇದಿಕೆಯಲ್ಲಿ ಯಾದವ ಸಭಾ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾನಂದ ಕಾವೂರು, ಕೋಶಾಧಿಕಾರಿ ಚಂದ್ರಶೇಖರ ಅಳಿಕೆ, ಯಾದವ ಸಭಾ ಕೇಂದ್ರ ಸಮಿತಿ ಸಲಹಾ ಮಂಡಳಿ ಅಧ್ಯಕ್ಷ ಸುಧಾಮ ಆಲೆಟ್ಟಿ ಉಪಸ್ಥಿತರಿದ್ದು, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ತಾಲೂಕು ಸಮಿತಿ ಕೋಶಾಧಿಕಾರಿ ದಾಮೋದರ ಕೇನಾಜೆ, ಕಾರ್ಯದರ್ಶಿ ಕೃಷ್ಣ ಬೆಟ್ಟ, ಉಪಾಧ್ಯಕ್ಷ ಬಾಲಕೃಷ್ಣ ಅಡ್ಡಬೈಲು, ತಾಲೂಕು ಮಹಿಳಾ ಸಮಿತಿ ಅಧ್ಯಕ್ಷೆ ರಾಜೀವಿ ಪರ್ಲಿಕಜೆ, ಯುವವೇದಿಕೆ ಅಧ್ಯಕ್ಷ ವಿನೋದ್ ಕೊಯಂಗಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಬೆಟ್ಟ ಅವರು ಸ್ವಾಗತಿಸಿ ವರದಿ ವಾಚಿಸಿದರು.
ದಾಮೋದರ ಕೇನಾಜೆ ಲೆಕ್ಕಪತ್ರ ಮಂಡನೆ ಮಂಡಿದರು. ಮಹಿಳಾ ಸಮಿತಿ ಕಾರ್ಯದರ್ಶಿ ಶ್ರೀಮತಿ ಚಂಚಲಾಕ್ಷಿ ಕರುಣಾಕರ ಹಾಸ್ಪರೆ ವರದಿ ಮತ್ತು ಲೆಕ್ಕಪತ್ರ ಮಂಡನೆ ಮಾಡಿದರು. ಯುವ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಸಾವಿತ್ರಿ ಕಣೆಮರಡ್ಕ ವರದಿ ಮತ್ತು ಲೆಕ್ಕಚಾರ ಮಂಡನೆ ಮಾಡಿದರು.
ಅಧ್ಯಕ್ಷ ಕರುಣಾಕರ ಹಾಸ್ಪರೆಯವರು ಮಾತನಾಡಿ ಸದಸ್ಯತನ ಜಾಸ್ತಿ ಮಾಡುವ ಬಗ್ಗೆ ತಾಲೂಕು ಸಮಿತಿಗೆ ಸ್ವಂತ ನೀವೇಷನ ಮಾಡುವ ಬಗ್ಗೆ ಹಾಗೂ ಪ್ರಾದೇಶಿಕ ಸಮಿತಿಗಳಲ್ಲಿ ಆಗಬೇಕಾದ ಬದಲಾವಣೆಯ ಬಗ್ಗೆ ಮಾತನಾಡಿದರು.
ಡಿಸೆಂಬರ್ ತಿಂಗಳಲ್ಲಿ ನಡೆಯುವ ಸಮಾವೇಶದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಕೋಶಾಧಿಕಾರಿ ದಾಮೋದರ ಕೇನಾಜೆಯವರು ವಂದಿಸಿದರು. ಸುಳ್ಯ ತಾಲೂಕಿನ ಎಲ್ಲಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರುಗಳು, ಪದಾಧಿಕಾರಿಗಳು, ಯುವ ಮತ್ತು ಮಹಿಳಾ ವೇದಿಕೆಯ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಯನ್ನು ನೀಡಿದರು.