ಜೀರ್ಣೋದ್ಧಾರಗೊಳ್ಳುತ್ತಿರುವ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು ಅ. 2ರಿಂದ ಅ. 12ರ ತನಕ ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಸೆ. 22ರಂದು ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.