ಮಂಡೆಕೋಲು ಅಂಗನವಾಡಿ ಕೇಂದ್ರದಲ್ಲಿ ಸೆಪ್ಟೆಂಬರ್ 23ರಂದು ಪೌಷ್ಟಿಕ ಸಪ್ತಾಹ ಕಾರ್ಯಕ್ರಮವು ನಡೆಯಿತು.
ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ವಾರಿಜ ಎ, ಸದಸ್ಯರುಗಳಾದ ಭವ್ಯ ಭೂದೇವಿ ಹಾಗೂ ಪೋಷಕರು ಆಶಾ ಕಾರ್ಯಕರ್ತೆ ಉಪಸ್ಥಿತರಿದ್ದರು. ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಪವಿತ್ರ ಇವರು ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿಯನ್ನು ನೀಡಿದರು ಸೇರಿದ ಎಲ್ಲಾ ಮಹಿಳೆಯರ ಬಿಪಿ ಶುಗರ್ ತಪಾಸಣೆ ಮಾಡಲಾಯಿತು.
ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಾರಿಜಾ ಕಾರ್ಯಕ್ರಮವನ್ನು ನಿರೂಪಿಸಿ ಕಾರ್ಯಕ್ರಮವನ್ನು ವಂದಿಸಿದರು.