ಸುಳ್ಯ : ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ

0

ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಸೆ.23 ರಂದು ಸ್ತ್ರೀಶಕ್ತಿ ಭವನ ಸುಳ್ಯದಲ್ಲಿ ಹಮ್ಮಿಕೊಳ್ಳಲಾಯಿತು, ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣರವರು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀಮತಿ ಉಮಾದೇವಿ, ಸಹಾಯಕ ನಿರ್ದೇಶಕರು ಗ್ರೇಡ್ 2 ಸಮಾಜ ಕಲ್ಯಾಣ ಇಲಾಖೆ ಸುಳ್ಯ, ಸುಧಾಕರ್ ಮುಖ್ಯಾಧಿಕಾರಿಗಳು ನಗರ ಪಂಚಾಯತ್ ಸುಳ್ಯ, ಶ್ರೀಮತಿ ಸುಹಾನ, ಸಹಾಯಕ ನಿರ್ದೇಶಕರು ತೋಟಗಾರಿಕಾ ಇಲಾಖೆ ಸುಳ್ಯ, ಶ್ರೀಮತಿ ಶೈಲಜಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶ್ರೀಮತಿ ಹೇಮಾವತಿ ಬ್ಲಾಕ್ ಸೊಸೈಟಿ ಅಧ್ಯಕ್ಷರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಮತ್ತು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಶ್ರೀಮತಿ ತಿರುಮಲೇಶ್ವರಿಯವರು ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ. ವರ್ಷಿಣಿ ಶೆಣೈ, ಪೂರಕ ಆಹಾರದ ಮಹತ್ವ ಸ್ಥಳೀಯ ಆಹಾರ ಸಂಪನ್ಮೂಲ ಸಂಗ್ರಹಣೆ ಬಗ್ಗೆ ಮಾರ್ಗದರ್ಶನ ನೀಡಿದರು. ಡಾ. ಜಯಶ್ರೀ ಶ್ರೀಕಾಂತ್ ಭಟ್ ಆರೋಗ್ಯಕರ ಜೀವನ ಶೈಲಿ ಬಗ್ಗೆ ಮಾಹಿತಿ ನೀಡಿದರು.

ಪೌಷ್ಟಿಕ ಆಹಾರ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಸಲಾಯಿತು. ಆರು ತಿಂಗಳು ತುಂಬಿದ ಮಗುವಿಗೆ ಅನ್ನ ಪ್ರಾಶನ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರು, ಪೋಷಣ್ ಅಭಿಯಾನ ಸಂಯೋಜಕರು, ಕಚೇರಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರುಗಳು,
ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಪ್ರಾರ್ಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಉಪಸ್ಥಿತರಿದ್ದರು.


ವಲಯ ಮೇಲ್ವಿಚಾರಕಿ ಶ್ರೀಮತಿ ರವಿ ಶ್ರೀ ನಿರೂಪಿಸಿದರು. ಹಾಗೂ ವಲಯ ಮೇಲ್ವಿಚಾರಕಿ ಶ್ರೀಮತಿ ದೀಪಿಕಾ ಸ್ವಾಗತಿಸಿ, ಶ್ರೀಮತಿ ವಿಜಯ ವಂದಿಸಿದರು.