ಪೆರಾಜೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಇಳಿದ ಕೆ ಎಸ್ ಆರ್ ಟಿ ಸಿ ಬಸ್-ಪ್ರಯಾಣಿಕರು ಪಾರು

0

ಪೆರಾಜೆಯ ಕಲ್ಚರ್ಪೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ಸು ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಸೆ 24 ರಂದು ರಾತ್ರಿ ಸಂಭವಿಸಿದೆ.

ಮಂಗಳೂರಿನಿಂದ ಮಂಡ್ಯಕ್ಕೆ ಹೋಗುತ್ತಿದ್ದ ಬಸ್ಸು ಕಲ್ಲುಚರ್ಪೆ ಬಳಿ ತಿರುವುನಲ್ಲಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಸೈಡ್ ಕೊಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಉಂಟಾಗಿದೆ ಎನ್ನಲಾಗಿದೆ.

ಬಸ್ಸಿನಲ್ಲಿ ಸುಮಾರು 24 ಮಂದಿ ಪ್ರಯಾಣಿಕರು ಇದ್ದು ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಘಟನೆ ಬಳಿಕ ಪ್ರಯಾಣಿಕರನ್ನು ಬೇರೆ ಬಸ್ಸಿನಲ್ಲಿ ಕಳುಹಿಸಿ ಕೊಡಲಾಗಿದೆ.