ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೈಂಟ್ ಬ್ರಿಜಿಡ್ಸ್ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ,, ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಹಾಗೂ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಬಾಲಕರ ವಿಭಾಗದಲ್ಲಿ ಸೈಂಟ್ ಬ್ರಿಜಿಡ್ಸ್ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಪಂಜದಬೈಲು ಮತ್ತು ತಂಡದ ವ್ಯವಸ್ಥಾಪಕರು ಸಿ!ಗ್ರೇಸಿ ಡಿ ಸೋಜ ಉಪಸ್ಥಿತರಿದ್ದರು.