ಕೇರಳದ ಮಲಪ್ಪುರಂಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ

0

ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರಿನಲ್ಲಿ ನಡೆಯುವ ಮಾಜಿ ಸಚಿವ ಆರ್ಯಡನ್ ಮೊಹಮ್ಮದ್ ಅನುಸ್ಮರಣೆ ಮತ್ತು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರಿಗೆ ಆರ್ಯಡನ್ ಮೊಹಮ್ಮದ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಶೇಷ ವಿಮಾನದಲ್ಲಿ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಸೆ.25ರಂದು ಆಗಮಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್ ಅವರು ಸ್ವಾಗತಿಸಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯರೊಂದಿಗೆ ಸಚಿವರಾದ ಭೈರತಿ ಸುರೇಶ್, ವೆಂಕಟೇಶ್, ಮುಖ್ಯಮಂತ್ರಿಗಳ ಸಲಹೆಗಾರರಾದ ನಸೀರ್ ಅಹಮದ್, ಗೋವಿಂದರಾಜ್, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಪ್ರಭಾಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.