ತಲೆಮರಸಿಕೊಂಡಿದ್ದ ಯುವಕನನ್ನು ಸುಳ್ಯಕ್ಕೆ ತಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು
ಸುಳ್ಯದಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಅಬ್ದುಲ್ ನಿಯಾಝ್ ಮೇಲೆ ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಬಳಿಕ ತಲೆ ಮರೆಸಿಕ್ಕೊಂಡಿದ್ದ ಆರೋಪಿ ಸುಶ್ಮಿತ್ ಎಂಬಾತ ಕುಮಟದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೋಲಿಸರು ಆತನನ್ನು ಬಂಧಿಸಿ ಸುಳ್ಯಕ್ಕೆ ಕರೆ ತಂದಿದ್ದು ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ.