ಕೊಲ್ಲಮೊಗ್ರು: ಕಣ್ಣಿನ ಉಚಿತ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ

0

ಕೆ.ವಿ.ಜಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ಕುರುಂಜಿಬಾಗ್, ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಗ್ರಾಮ ಪಂಚಾಯತ್ ಕೊಲ್ಲಮೊಗ್ರು, ಯುವಕ ಮತ್ತು ಯುವತಿ ಮಂಡಲ ಕೊಲ್ಲಮೊಗ್ರು ಇವುಗಳ ಸಹಭಾಗಿತ್ವದಲ್ಲಿ ಸೆ.24 ರಂದು ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರವು ನಡೆಯಿತು.

ಈ ಸಂದರ್ಭದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಣ್ಣಿನ ವಿಭಾಗದ ಪ್ರೊಫೆಸರ್ ಡಾ| ಮಹೇಶ್ ಬಾಬು, ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ। ಕುಲದೀಪ್ , ಕೊಲ್ಲಮೊಗ್ರು ಗ್ರಾ.ಪಂ ಅಧ್ಯಕ್ಷೆ ಜಯಶ್ರೀ ಚಾಂತಾಳ, ಉಪಾಧ್ಯಕ್ಷ ಅಶ್ವಥ್ ಯಲದಾಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಮಾರು 75 ಜನರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.