ಯುವಶಕ್ತಿ ಸಂಘ ಐವರ್ನಾಡು,ಸಾರ್ವಜನಿಕರ ಸಹಕಾರದೊಂದಿಗೆ 20 ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವವು ಅ.05 ಮತ್ತು ಅ.06 ರಂದು ಪುತ್ತಿಲ ಗಿರೀಶ್ ಅಸ್ರಣ್ಣರವರ ನೇತೃತ್ವದಲ್ಲಿ ಐವರ್ನಾಡು ಸ.ಹಿ.ಪ್ರಾ.ಶಾಲಾ ಶ್ರೀ ಮಾತಾಜಿ ಸಭಾಭವನದ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ವಿವಿಧ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ ಗಣಹೋಮ ಮತ್ತು ಶ್ರೀ ಶಾರದಾ ದೇವಿಯ ಪ್ರತಿಷ್ಠಾಪನೆ ನಡೆಯಲಿದೆ.
ಬಳಿಕ ಐವರ್ನಾಡು ಗ್ರಾಮಸ್ಥರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ.
ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಸಂಜೆ ಗಂಟೆ 6.30 ರಿಂದ ಪ್ರಾಥಮಿಕ ಶಾಲಾ ಮಕ್ಕಳ ಹಾಗೂ ಅಂಗನವಾಡಿ ಮಕ್ಕಳ ಡ್ಯಾನ್ಸ್ ನಡೆಯಲಿದೆ.
ರಾತ್ರಿ ಗಂಟೆ 7.30 ರಿಂದ “ಸಾಂಸ್ಕೃತಿಕ ಸಂಜೆ” ನಡೆಯಲಿದೆ.
ರಾತ್ರಿ ಸಭಾ ಕಾರ್ಯಕ್ರಮ ನಡೆಯಲಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎ.ಓ.ಎಲ್.ಇ.ಕಮಿಟಿ ಬಿ.ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ ಉಪಸ್ಥಿತರಿರುವರು.
ಎಂ.ಡಿ.ಎಸ್.ನಲ್ಲಿ ಚಿನ್ನದ ಪದಕ ವಿಜೇತರಾದ ಡಾ.ಸಂದೀಪ್ ಬಿ.ಎಸ್.ಬಿರ್ಮುಕಜೆ,ನಿವೃತ್ತ ಪಂಚಾಯತ್ ಉದ್ಯೋಗಿ ಪುರುಷೋತ್ತಮ ನಿಡುಬೆ ಪೂಜಾರಿಮನೆ ಇವರನ್ನು ಸನ್ಮಾನಿಸಲಾಗುವುದು.
ರಾತ್ರಿ ಗಂಟೆ 9.00 ಕ್ಕೆ ಮಹಾಪೂಜೆ,ಪ್ತಸಾದ ವಿತರಣೆ ನಡೆಯಲಿದೆ.
ಅಮೋಘ ಸಿಡಿಮದ್ದಿನ ಪ್ರದರ್ಶನ ನಡೆಯಲಿದೆ.ಬಳಿಕ ಸಾರ್ವಜನಿಕರಿಗೆ ಅನ್ನಪ್ರಸಾದ ನಡೆಯಲಿದೆ.
ರಾತ್ರಿ ಗಂಟೆ 10.00 ರಿಂದ ವಿಠಲ ನಾಯಕ್ ಮತ್ತು ಬಳಗದವರಿಂದ “ಗೀತಾ ಸಾಹಿತ್ಯ ಸಂಭ್ರಮ” ನಡೆಯಲಿದೆ.
ಬೈರವಿ ನಾಟ್ಯಾಲಯ ಐವರ್ನಾಡು ಇವರಿಂದ “ನೃತ್ಯಾರ್ಪಣಂ” ಹಾಗೂ ಫ್ಯೂಶನ್ ಇನ್ಸಿಟ್ಯೂಟ್ ಆಫ್ ಡ್ಯಾನ್ಸ್ ಸುಳ್ಯ ತಂಡದವರಿಂದ “ಡ್ಯಾನ್ಸ್ ಡ್ಯಾನ್ಸ್ “,ಯುವಶಕ್ತಿ ಸದಸ್ಯರಿಂದ “ಕಾರ್ಯಕ್ರಮ ವೈವಿಧ್ಯ” ನಡೆಯಲಿದೆ.
ಅ.06 ರಂದು ಬೆಳಿಗ್ಗೆ ಭಜನಾ ಕಾರ್ಯಕ್ರಮ,ಅಕ್ಷರಾಭ್ಯಾಸ, ಆಯುಧ ಪೂಜೆ ನಡೆಯಲಿದೆ.
ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.
ಗಂಟೆ 12.30 ರಿಂದ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ಐವರ್ನಾಡು ಮುಖ್ಯ ರಸ್ತೆಯಲ್ಲಿ ಸಾಗಿ ಬಾಂಜಿಕೋಡಿ ಹೊಳೆಯಲ್ಲಿ ಜಲಸ್ತಂಭನಾ ಮಾಡಲಾಗುವುದು.