ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೂತನವಾಗಿ ಆರಂಭವಾದ ತಂಬಾಕು ವ್ಯಸನ ಮುಕ್ತ ಕೇಂದ್ರ ಹಾಗೂ ಶ್ವಾಸಕೋಶ ಪುನಶ್ಚೇತನ ಕೇಂದ್ರದ ಉದ್ಘಾಟನೆ ಮತ್ತು
ಶ್ವಾಸಕೋಶ ದಿನಾಚರಣೆ ಸೆ. 26ರಂದು ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ ಚಿದಾನಂದ
ಶ್ವಾಸಕೋಶ ಪುನಶ್ಚೇತನ ಕೇಂದ್ರ ಹಾಗೂ ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಕಾಲೇಜಿನ ಸಭಾಂಗಣದಲ್ಲಿ ಶ್ವಾಸಕೋಶ ದಿನಾಚರಣೆಯ ಪ್ರಯುಕ್ತ ಅರಿವು ಕಾರ್ಯಕ್ರಮ ನಡೆಯಿತು. ಡಾ. ಕೆ.ವಿ ಚಿದಾನಂದ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ವಾಸಕೋಶ ಔಷಧ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಪ್ರೀತಿರಾಜ್ ಬಳ್ಳಾಲ್ ಶ್ವಾಸಕೋಶ ದಿನಾಚರಣೆಯ ಮಾಹಿತಿಯನ್ನು ನೀಡಿದರು. ಶ್ವಾಸಕೋಶ ಔಷಧ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಅನಿರುದ್ಧ ಶ್ವಾಸಕೋಶದ ಪುನಶ್ಚೇತನ ಕೇಂದ್ರದ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು. ಮನೋವೈದ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ಹಾಗೂ ಮುಖ್ಯಸ್ಥರಾದ ಡಾ. ಪೂನಂ ತಂಬಾಕು ವ್ಯಸನ ಮುಕ್ತ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು. ಡಾ. ಶಮಾ ಪ್ರಾರ್ಥಿಸಿದರು.ಡಾ. ಸುಶ್ಮಿತಾ ಸ್ವಾಗತಿಸಿ, ಡಾ. ಪ್ರೀತಿರಾಜ್ ಬಳ್ಳಾಲ್ ವಂದಿಸಿದರು. ಈ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.