ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

0

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕ್ ನಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ.


ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕ್ ನಿರ್ದೇಶಕರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಗಣಪತಿಯವರು ಪ್ರದಾನ ಮಾಡಿ ಗೌರವಿಸಿದರು. ಪೆರಾಜೆ ಪ್ರಾಥಮಿಕ ಕೃಷಿ ಕತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದಟ್ಟಿ ರವರು ಪ್ರಶಸ್ತಿಯನ್ನು ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಕೊಡಗು ಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಿ. ನಾಯಕ್, ಪೆರಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಸದಸ್ಯರುಗಳಾದ ಸುಭಾಷ್ಚಂದ್ರ ಬಂಗಾರಕೋಡಿ, ಪ್ರವೀಣ್ ಮಜಿಕೋಡಿ, ಉದಯಚಂದ್ರ ಕಂಬಳಚೇರಿ ಉಪಸ್ಥಿತರಿದ್ದರು.