ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯದಂತೆ ನವರಾತ್ರಿ ಉತ್ಸವವು ಅ.2 ರಿಂದ 11ರವರೆಗೆ ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು, ಮಹಾಸಂಪ್ರೋಕ್ಷಣೆ ಅ.12 ರಂದು ನಡೆಯಲಿದೆ.
ಅ.2 ರಂದು ನವರಾತ್ರಿ ಪೂಜೆ ಪ್ರಾರಂಭಗೊಳ್ಳಲಿದೆ. ಅ.11 ರಂದು ಆಯುಧಪೂಜೆಯ ಸಲುವಾಗಿ ವಾಹನ ಪೂಜೆ ನಡೆಯಲಿದೆ.ಅ.12ರಂದು ಬೆಳಿಗ್ಗೆ ಗಣಪತಿ ಹವನ, ಸೀಯಾಳಾಭಿಷೇಕ, ಮಕ್ಕಳಿಗೆ ಅಕ್ಷರಾಭ್ಯಾಸ, 10.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಮಹಾಸಂಪ್ರೋಕ್ಷಣೆ, ಅನ್ನಸಂತರ್ಪಣೆ ನಡೆಯಲಿದೆ. ಪ್ರತಿದಿನ ಸಂಜೆ 6ರಿಂದ 7 ರವರೆಗೆ ಭಜನಾ ಕಾರ್ಯಕ್ರಮ, 7ರಿಂದ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮೂಡಬಿದ್ರೆ ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಹಲವಾರು ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.