ನ್ಯಾಯಾಧೀಶರುಗಳು, ವಕೀಲರುಗಳು ಭಾಗಿ
ಸುಳ್ಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.
ಅಭಿಯಾನದಲ್ಲಿ ಸುಳ್ಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರುಗಳಾದ ಬಿ ಮೋಹನ್ ಬಾಬು ಹಾಗೂ ಕು.ಅರ್ಪಿತಾ,ಎಪಿಪಿ ಗಳು ಭಾಗವಹಿಸಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಸಿಕೊಂಡರು.
ಸುಳ್ಯ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರುಗಳು, ನ್ಯಾಯಾಲಯದ ಎಲ್ಲಾ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.