ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಏನೆಕಲ್ಲು ಗ್ರಾಮದ ಶಿವಪ್ಪ ಗೌಡ ಪಳಂಗಾಯ ರವರು ಅಲ್ಪ ಕಾಲದ ಅಸೌಖ್ಯದಿಂದ ಸೆ30 ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 87 ವರುಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಕಮಲ, ಪುತ್ರ ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ್ ಪಳಂಗಾಯ, ಪುತ್ರಿ ಶ್ರೀಮತಿ ಜಲಜಾಕ್ಷಿ ಹರಿಪ್ರಕಾಶ್ ಬೈಲಾಡಿ, ಸೊಸೆ, ಅಳಿಯ, ಮೊಮ್ಮಕ್ಕಳು ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ನಾಳೆ ಅ.1 ರಂದು ಮುಂಜಾನೆ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.