ಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ ಉತ್ಸವ ಸಮಿತಿಯ ಪೂರ್ವಭಾವಿ ಸಭೆಯು ತಾ.ಪಂ. ಸಭಾಂಗಣದಲ್ಲಿ ಸೆ.30ರಂದು ಸಂಜೆ ಜರುಗಿತು.
ಸಭೆಯಲ್ಲಿ ದಸರಾ ಉತ್ಸವದ ವಿವಿಧ ಜವಾಬ್ದಾರಿಗಳನ್ನು ಸಮಿತಿಯ ಉಪಸಮಿತಿಗಳಿಗೆ ಹಂಚಿಕೆ ಮಾಡಲಾಯಿತು.
ಜೊತೆಗೆ ಉತ್ಸವಕ್ಕೆ ಧನಸಂಗ್ರಹದ ಕುರಿತಂತೆಯೂ ಚರ್ಚಿಸಲಾಯಿತು.
ಸಭೆಯ ಬಳಿಕ ಉತ್ಸವ ಸಮಿತಿಯ ಪದಾಧಿಕಾರಿಗಳು ಪೊಲೀಸ್ ಠಾಣೆಗೆ ಭೇಟಿ ಎಸ್.ಐ. ಅವರಿಗೆ ಆಮಂತ್ರಣ ನೀಡಿ ದಸರಾದ ಒಂಭತ್ತು ದಿನಗಳ ಕಾಲ ಆಗಮಿಸುವ ಭಕ್ತಾದಿಗಳಿಗೆ ವಾಹನ ಪಾರ್ಕಿಂಗ್ ವ್ಯವಸ್ಥೆ ಹಾಗೂ ಅಂತಿಮ ದಿನದ ಶೋಭಾಯಾತ್ರೆಯಂದು ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಡಾ. ಲೀಲಾಧರ್ ಡಿ.ವಿ., ಹಾಗೂ ಉತ್ಸವ ಸಮಿತಿಯ ಪದಾಧಿಕಾರಿಗಳು, ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ ದಾಸ್, ಅಧ್ಯಕ್ಷ ನಾರಾಯಣ ಕೇಕಡ್ಕ, ದಸರಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಗೌರವ ಸಲಹೆಗಾರರಾದ ಎನ್.ಎ. ರಾಮಚಂದ್ರ, ಎನ್. ಜಯಪ್ರಕಾಶ್ ರೈ, ಉತ್ಸವ ಸಮಿತಿ ಪ್ತಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ಕೋಶಾಧಿಕಾರಿ ಅಶೋಕ್ ಪ್ರಭು, ಸಮಿತಿಯ ಹರೀಶ್ ಉಬರಡ್ಕ, ಸುನಿಲ್ ಕೇರ್ಪಳ ಸೇರಿದಂತೆ ವಿವಿಧ ಉಪಸಮಿತಿಯ ಪದಾಧಿಕಾರಿಗಳು, ಶ್ರೀ ಶಾರದಾಂಬ ಸಮೂಹ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.