ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ೨೦೨೪-೨೫ನೇ ಶೈಕ್ಷಣಿಕ ವರ್ಷವು ಸೆ.೩೦ ರಂದು ಪ್ರಾರಂಭವಾಗಿದ್ದು, ಪ್ರಥಮ ವರ್ಷದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ),ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ.ವಿ. ಚಿದಾನಂದರವರು ವಹಿಸಿ ಕಾನೂನು ವಿದ್ಯಾಭ್ಯಾಸದ ಮಹತ್ವಗಳು ಮತ್ತು ಮುಂದಿನ ಅವಕಾಶಗಳ ಬಗ್ಗೆ ಕೂಲಂಕುಷವಾಗಿ ತಿಳಿಸಿದರು.
ವೇದಿಕೆಯಲ್ಲಿ ಎ.ಓ.ಎಲ್.ಇ ಉಪಾಧ್ಯಕ್ಷರಾದ ಶ್ರೀಮತಿ ಶೋಭಾ ಚಿದಾನಂದ, ಎ.ಓ.ಎಲ್.ಇ ಇದರ ಸದಸ್ಯರಾದ ಜಗದೀಶ್ ಅಡ್ತಲೆ, ನೆಹರು ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ಕೆ.ವಿ.ಜಿ. ಕಾನೂನು ಕಾಲೇಜಿನ ಸಲಹೆಗಾರರಾದ ಹೇಮನಾಥ್ ಕೆ.ವಿ. ಕಾನೂನು ಕಾಲೇಜಿನ ಆಡಳಿತಾಧಿಕಾರಿ ಫ್ರೊ. ದಾಮೋದರ ಗೌಡ ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಶುಭಹಾರೈಸಿದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಟೀನಾ ಹೆಚ್.ಎಸ್. ಕಾಲೇಜಿನ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿನಿಯರಾದ ಸುಶ್ಮಿತಾ ಬಿ.ಎಮ್., ರಮ್ಯ ಕೆ.ಎಮ್. ಮತ್ತು ಚಂದನಾ. ಪಿ.ಎಸ್. ಪ್ರಾರ್ಥಿಸಿದರು. ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಕಲಾವತಿ ಎಮ್. ಸ್ವಾಗತಿಸಿ, ಉಪನ್ಯಾಸಕಿ ರಶ್ಮಿ ಹೆಚ್. ವಂದಿಸಿದರು. ಉಪನ್ಯಾಸಕಿ ಉಷಾ ಸಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು, ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.