ಶೇಣಿ : ಗಾಂಧೀಜಿ – ಶಾಸ್ತ್ರೀಜಿ ಜಯಂತಿ ಆಚರಣೆ

0

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶೇಣಿಯಲ್ಲಿ ಅ.2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆರಿಸಲಾಯಿತು.

ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಮಾಧವ ಟಿ.ಪಿ. ಯವರು, ಎಸ್. ಡಿ. ಎಂ. ಸಿ. ಸದಸ್ಯರು, ಪೋಷಕರು, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ವಿನಯಪ್ರಸಾದ್ ಟಿ. ದಿನದ ಮಹತ್ವ ಕುರಿತು ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಲಿಂಗಪ್ಪ ಗೌಡ ಚೂಂತಾರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರು ಪ್ರಭಾಕರ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಇವರೆಲ್ಲರ ಸಹಕಾರದೊಂದಿಗೆ ಶ್ರಮದಾನದ ಮೂಲಕ ಶಾಲಾ ಆವರಣವನ್ನು ಸ್ವಚ್ಛತೆ ಮಾಡಿ, ಶಾಲೆಯಲ್ಲಿ ಪೌಷ್ಟಿಕ ವನವನ್ನು ನಿರ್ಮಾಣ ಮಾಡಲಾಯಿತು.