ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಅ. 2 ರಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಬಳಿಕ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರಿಂದ ಭಜನ್ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.