ಶ್ರೀ ರಾಜರಾಜೇಶ್ವರಿ ದೇವಸ್ಥಾನ ಗೌರಿಪುರಂ ಬೆಳ್ಳಾರೆ ಇಲ್ಲಿ ನವರಾತ್ರಿ ಉತ್ಸವಗಳು ಅ. 12ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪ್ರತೀ ದಿನ ಸಂಜೆ ಗಂಟೆ 7.00ರಿಂದ 8.30ರ ತನಕ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ಅ. 7ರಂದು ಕುನ್ನತ್ತಿಲ್ ಬ್ರಹ್ಮಶ್ರೀ ತಂತ್ರಿ ಮುರಳಿಕೃಷ್ಣ ನಂಬೂದರಿಯವರ ನೇತೃತ್ವದಲ್ಲಿ ಶ್ರೀಚಕ್ರ ದುರ್ಗಾಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 7.00 ಗಂಟೆಯಿಂದ ಗಣಪತಿ ಹೋಮ, ಪೂ. 8ರಿಂದ ವಾಹನಪೂಜೆ ಮಧ್ಯಾಹ್ನ 12.00ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5.30ರಿಂದ ಶ್ರೀಚಕ್ರ ದುರ್ಗಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.