ಮುಡ್ನೂರು ಮರ್ಕಂಜ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಡ್ನೂರು ಮರ್ಕಂಜ ಇಲ್ಲಿಂದ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಸಮಾರಂಭವು ಆ.1ರಂದು
ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿಜಯಕುಮಾರ್ ಎರ್ಮೆಟ್ಟಿ ಇವರು ವಹಿಸಿದ್ದರು.

ಇದೇ ಸಂದರ್ಭದಲ್ಲಿ ಸುಧೀರ್ಘ 23 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ಚಿನ್ನಮ್ಮ ಹಾಗೂ 14 ವರ್ಷ ಸೇವೆಯನ್ನು ಸಲ್ಲಿಸಿದ ಸಹ ಶಿಕ್ಷಕಿಯಾದ ಶ್ರೀಮತಿ ಮಮತ ಇವರನ್ನು ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಸುಜಾತ ಕುಮಾರಿ ಹಾಗೂ ಸದಸ್ಯರು, ಶಿಕ್ಷಕ ವೃಂದ ಹಳೆ ವಿದ್ಯಾರ್ಥಿಗಳು, ಊರಿನ ಸಂಘ-ಸಂಸ್ಥೆಗಳು, ಊರಿನ ಹಿರಿಯರು, ಊರ ವಿದ್ಯಾಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳೆಲ್ಲರೂ ತಮ್ಮ ನೆಚ್ಚಿನ ಶಿಕ್ಷಕರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಚಿನ್ನಮ್ಮ ಮತ್ತು ಮಮತಾರವರು ಶಾಲೆಗೆ ನೀಡಿದ ದತ್ತಿ ನಿಧಿಯನ್ನು ಮುಖ್ಯ ಶಿಕ್ಷಕರಿಗೆ ಹಸ್ತಾಂತಸಿದರು.

ನಂತರ ಶಾಲಾ ಹಿರಿಯ ಸಹ ಶಿಕ್ಷಕರಾದ ಬೆಳ್ಳಪ್ಪ ಇವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಸನ್ಮಾನ ಪತ್ರವನ್ನು ಸಹ ಶಿಕ್ಷಕಿಯರಾದ ಶ್ರೀಮತಿ ಯಶಸ್ವಿನಿ ಹಾಗೂ ಶ್ರೀಮತಿ ಜ್ಯೋತಿ ಇವರು ವಾಚಿಸಿದರು.

ಮುಖ್ಯ ಶಿಕ್ಷಕರಾದ ದೇವರಾಜ್ ಎಸ್.ಕೆ. ಸ್ವಾಗತಿಸಿ, ಶ್ರೀಮತಿ ದ್ರವ್ಯ ಇವರು ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕಿ ಕು| ಅಶ್ವಿನಿ ನಿರ್ವಹಿಸಿದರು.