ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಬೆಂಗಳೂರು ಇದರ ಸಹಯೋಗದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು ಜಂಟಿಯಾಗಿ ಅಧಿಕಾರಿಗಳು, ನೌಕರರು, ಆಡಳಿತ ವರ್ಗ ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಸರಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸದೆ ಇರುವ ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 4 ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆಗಳನ್ನು ನಿಲ್ಲಿಸಿ ಅನಿರ್ದಾಷ್ಟಾವಧಿ ಹೋರಾಟಕ್ಕೆ ಅತಿ ಆಗತ್ಯ ಮೂಲಭೂತ ಸೌಕರ್ಯಗಳನ್ನು ಹೊರತುಪಡಿಸಿ ( ಕುಡಿಯುವ ನೀರು ಮತ್ತು ಸ್ವಚ್ಛತೆ) ನಡೆಸಲಿರುವ ಹೋರಾಟಕ್ಕೆ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ ಸಂಪೂರ್ಣ ಬೆಂಬಲ ಇದೆ ಎಂದು ಸುಳ್ಯ ಗ್ರಾಮ ಪಂಚಾಯಿತಿ ಸದಸ್ಯರುಗಳ ಒಕ್ಕೂಟದ ಅಧ್ಯಕ್ಷರಾದ ಶೈಲೇಶ ಅಂಬೆಕಲ್ಲು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಕೇಶವ ಅಡ್ತಲೆ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.
Home ಪ್ರಚಲಿತ ಸುದ್ದಿ ಪಂಚಾಯತ್ ನೌಕರರ ಮತ್ತು ಸದಸ್ಯರ ಆನಿರ್ದಿಷ್ಟಾವಧಿ ಹೋರಾಟಕ್ಕೆ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ...